ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಭ್ರಷ್ಟಾಚಾರ ನಿಗ್ರಹದಳದ (ACB) ಅಧಿಕಾರಿಗಳ ಹೆಸರಿನಲ್ಲಿ ಕೆಲವು ದುಷ್ಕರ್ಮಿಗಳು ಸಾರ್ವಜನಿಕ ನೌಕರರಿಂದ ಹಣ ವಸೂಲಿ ಮಾಡುತಿರುವ/ಮಾಡಲು ಪ್ರಯತ್ನಿಸುತ್ತಿರುವ ಕುರಿತು 26 ಪ್ರಕರಣಗಳನ್ನು ದಾಖಲಿಸಲಾಗಿದೆ.
ಎಸಿಬಿ ಅಪರ ಪೊಲೀಸ್ ಮಹಾನಿರ್ದೇಶಕರು ಈ ಕುರಿತು ಪ್ರಕಟಣೆಯೊಂದನ್ನು ಹೊರಡಿಸಿದ್ದಾರೆ.
“ಇತ್ತೀಚಿನ ದಿನಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ಹೆಸರು ಹೇಳಿ ಕೆಲವು ದುಷ್ಕರ್ಮಿಗಳು ಸಾರ್ವಜನಿಕ ನೌಕರರು/ಸಿಬ್ಬಂದಿಗಳಿಂದ ಹಣ ವಸೂಲಿ ಮಾಡುತ್ತಿರುವ ಕುರಿತಂತೆ ಪ್ರಕರಣಗಳು ಗಮನಕ್ಕೆ ಬರುತ್ತಿರುತ್ತವೆ.
ಈಗಾಗಲೇ ಈ ಬಗ್ಗೆ ಸಂಬಂಧಪಟ್ಟ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ಹೆಸರು ಹೇಳಿ ಸಾರ್ವಜನಿಕ ಅಧಿಕಾರಿ/ಸಿಬ್ಬಂದಿಗಳಿಂದ ಹಣ ವಸೂಲಿ ಮಾಡುತ್ತಿರುವ ಆರೋಪಿತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ, ಕರ್ನಾಟಕದಾದ್ಯಂತ ಒಟ್ಟು 26 ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ.
6 ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದೆ. 20 ಪ್ರಕರಣಗಳು ತನಿಖಾ ಹಂತದಲ್ಲಿವೆ.
ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ಹೆಸರಿನಲ್ಲಿ ಹಣ ಅಥವಾ ಉಡುಗೊರೆಗಳನ್ನು ಅಪೇಕ್ಷಿಸಿ ದೂರವಾಣಿ ಮೂಲಕ ಅಥವಾ ನೇರವಾಗಿ ಕೇಳಿದ್ದಲ್ಲ/ಅಪೇಕ್ಷಿಸಿದ್ದಲ್ಲ/ಬೇ ಡಿಕೆ ಇಟ್ಟಲ್ಲಿ ಈ ಕುರಿತಾಗಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಹಾಗೂ ಸ್ಥಳೀಯ ಪೊಲೀಸ್ ಠಾಣಿಗಳಲ್ಲಿ ದೂರು ದಾಲಿಸಲು ಕ್ರಮ ಕೈಗೊಳ್ಳಲು ಸಾರ್ವಜನಿಕ/ಸರ್ಕಾರಿ ನೌಕರುಗಳಿಗೆ ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ