ಪ್ರಗತಿವಾಹಿನಿ ಸುದ್ದಿ: ಇಡಿ ಅಧಿಕಾರಿಗಳೆಂದು ಸುಲೈಮಾನ್ ಹಾಜಿ ಮನೆಯ ಮೇಲೆ ದಾಳಿ ಹಾಗೂ ಹಣ ಲೂಟಿ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ಪತ್ತೆಗೆ ಸಭಾಧ್ಯಕ್ಷ ಯು.ಟಿ. ಖಾದರ್ ಸೂಚನೆ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿ ಉದ್ಯಮಿ ಸಿಂಗಾರಿ ಬೀಡಿ ಮಾಲೀಕ ಸುಲೈಮಾನ್ ಹಾಜಿ ಹಾಗೂ ಕುಟುಂಬಸ್ಥರ ಜೊತೆ ಸಭಾಧ್ಯಕ್ಷ ಯು.ಟಿ.ಖಾದರ್ ದೂರವಾಣಿ ಮೂಲಕ ಮಾತುಕತೆ ನಡೆಸಿದರು, ಈ ವೇಳೆ ಸುಲೈಮಾನ್‌ಗೆ ಧೈರ್ಯ ತುಂಬಿದ್ದು, ಶೀಘ್ರ ಕೃತ್ಯ ನಡೆಸಿರುವ ವ್ಯಕ್ತಿಗಳನ್ನು ಬಂಧಿಸುವುದಾಗಿ ಭರವಸೆ ನೀಡಿದರು.
ಅದೇ ರೀತಿ ಘಟನೆಗೆ ಸಂಬಂಧಿಸಿದಂತೆ ಸಭಾಧ್ಯಕ್ಷ ಯು.ಟಿ ಖಾದರ್ ಗೃಹ ಇಲಾಖೆಯ ವರಿಷ್ಠಾಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ಶೀಘ್ರ ಪತ್ತೆಗೆ ಕ್ರಮ ಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಗೃಹ ಇಲಾಖೆಯು ಡಿವೈಎಸ್ಪಿ ನೇತೃತ್ವದಲ್ಲಿ 4 ತಂಡಗಳನ್ನು ರಚಿಸಿದ್ದು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ