
ಪ್ರಗತಿವಾಹಿನಿ ಸುದ್ದಿ : ಕಾಫಿನಾಡು ಚಿಕ್ಕಮಗಳೂರಲ್ಲಿ ಮಂಗನ ಕಾಯಿಲೆಯ ಭಯ ಆವರಿಸಿದೆ. ವರ್ಷಪೂರ್ತಿ ದಾಖಲೆ ಮಳೆ ಸುರಿಯುವ ಚಿಕ್ಕಮಗಳೂರಲ್ಲಿ ಈ ವರ್ಷ ಜನವರಿಯಲ್ಲಿ ಮಂಗನ ಕಾಯಿಲೆ ಆತಂಕ ಎದುರಾಗಿದೆ.
ಈಗಾಗಲೇ KFD ವೈರಸ್ ಸೋಂಕಿತರ ಸಂಖ್ಯೆ 6ಕ್ಕೆ ಏರಿದ್ದು ಜನರು ಭಯಭೀತಿಗೊಂಡಿದ್ದಾರೆ. ಅರಣ್ಯದಂಚಿನಲ್ಲಿ ಮತ್ತು ಕಾಫಿ ತೋಟಗಳಲ್ಲಿ ವಾಸವಾಗಿರುವ ಜನರು ಎಚ್ಚರಿಕೆವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ.
ಜಿಲ್ಲೆಯಲ್ಲಿ ಕಂಡು ಬಂದಿರುವ 6 ಪ್ರಕರಣಗಳಲ್ಲಿ ಒಬ್ಬರು ಈಗಾಗಲೇ ಗುಣಮುಖರಾಗಿದ್ದು, ಮೂವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಜನರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಸೂಕ್ತ ಮುಂಜಾಗ್ರತೆ ತೆಗೆದುಕೊಳ್ಳಬೇಕು. ಕಾಡಿನಲ್ಲಿ ಮೃತಪಟ್ಟ ಮಂಗಗಳಿಗೆ ಕಚ್ಚುವ ಉಣ್ಣೆಯಂತಹ ವೈರಾಣುವಿನಿಂದ ಈ ರೋಗ ಹರಡುತ್ತದೆ. ಹಾಗಾಗಿ ಕಾಡು ಅಥವಾ ತೋಟಗಳಿಗೆ ತೆರಳುವವರು ಮೈತುಂಬ ಬಟ್ಟೆ ತೊಡಬೇಕು, ಹೆಚ್ಚಿನ ಚಳಿ, ಜ್ವರ, ತಲೆನೋವು, ಶೀತ, ವಾಂತಿ ಉಂಟಾದರೆ ಕೂಡಲೆ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ