Kannada NewsKarnataka NewsLatest

*ಸಿದ್ದಾಪುರದಲ್ಲಿ ಮಂಗನ ಕಾಯಿಲೆಗೆ ಜನರು ತತ್ತರ; 10 ದಿನಗಳಲ್ಲಿ 21 ಜನರಲ್ಲಿ ಸೋಂಕು ದೃಢ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಂಗನ ಕಾಯಿಲೆ ಪ್ರಕರಣ ಮತ್ತೆ ಹೆಚ್ಚುತ್ತಿದೆ. ಅದರಲ್ಲಿಯೂ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಮಂಗನ ಕಾಯಿಲೆಗೆ ಜನರು ತತ್ತರಿಸುತ್ತಿದ್ದಾರೆ.

ಕಳೆದ 10 ದಿನಗಳಲ್ಲಿ 21 ಜನರಲ್ಲಿ ಮಂಗನ ಕಾಯಿಲೆ ಸೋಂಕು ಪತ್ತೆಯಾಗಿದೆ. ಬಿಸಿಲಿನ ಝಳ ಹೆಚ್ಚಿದಂತೆ ಕಾಯಿಲೆಯೂ ಹೆಚ್ಚಾಗುವ ಸಾಧ್ಯತೆ ಇದೆ.

ಈಗಾಗಲೇ 8 ಜನರು ಆಸ್ಪತ್ರೆಗೆ ದಾಖಲಾಗಿ ಅವರಲ್ಲಿ ಇಬ್ಬರನ್ನು ಮಣಿಪಾಲ್ ಆಸ್ಪತೆಗೆ ದಾಖಲಿಸಲಾಗಿದೆ. 6 ಜನ ಸಿದ್ದಾಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 13 ಜನರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಮಂಗನ ಕಾಯಿಲೆಗೆ ರೋಗ ನಿರೋಧಕ ಔಷಧ ನೀಡಲು ಆರೋಗ್ಯ ಇಲಾಖೆಯಲ್ಲಿ ಔಷಧಿ ಕೊರತೆ ಉಂಟಾಗಿದೆ. ಎರಡನೇ ಬಾರಿ ಮಂಗನ ಕಾಯಿಲೆ ಬಂದಲ್ಲಿ ರಕ್ತಸ್ರಾವವಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಜನರು ಮುಂಜಾಗೃತೆ ವಹಿಸಲೇಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

Home add -Advt
https://pragativahini.com/tumakurumother3-childrenmissing/

Related Articles

Back to top button