
ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಮಂಗನ ಕಾಯಿಲೆಯಿಂದ ಯುವತಿಯೊಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಮನೆಕೊಪ್ಪ ಗ್ರಾಮದಲ್ಲಿ ನಡೆದಿದೆ.
18 ವರ್ಷದ ಯುವತಿ ಅನನ್ಯ ಮೃತರು. ಬೊಪ್ಪನಮನೆ ನಿವಾಸಿ ಅನನ್ಯಾ ತೀವ್ರ ಚಳಿ, ಜ್ವರದಿಂದ ಬಳಲುತ್ತಿದ್ದರು. ಮೂರು ದಿನ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಯುವತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಕೆ ಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಿಸದೇ ಯುವತಿ ಸಾವನ್ನಪ್ಪಿದ್ದು, ಇದು ರಾಜ್ಯದಲ್ಲಿ ಈ ವರ್ಷ ಮಂಗನ ಕಾಯಿಲೆಯಿಂದ ಸಾವನ್ನಪ್ಪಿದ ಮೊದಲ ಪ್ರಕರಣವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ