
ಪ್ರಗತಿವಾಹಿನಿ ಸುದ್ದಿ: ಬೇರೆ ಬೇರೆ ದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣ ಉಲ್ಭಣಗೊಳ್ಲುತ್ತಿದ್ದು, ಈ ಹಿನ್ನೆಲೆಯಲ್ಲಿ ಭಾರತದಲ್ಲಿಯೂ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ಕರ್ನಾಟಕದಲ್ಲಿ ಆರೋಗ್ಯ ಇಲಾಖೆ ವಿಮನ ನಿಲ್ದಾಣಗಳಲ್ಲಿ ಅಲರ್ಟ್ ಘೋಷಿಸಿದೆ.
ರಾಜ್ಯದ ಎಲ್ಲಾ ವಿಮಾನ ನಿಲ್ದಾಣ, ಬಂದರು ಪ್ರದೇಶ, ಜನನಿಬಿಡ ಪ್ರದೇಶಗಳಲ್ಲಿ ಮ್ಂಕಿಪಾಕ್ಸ್ ಬಗ್ಗೆ ನಿಗಾ ವಹಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಅಂತರಾಷ್ಟ್ರೀಯ ಪ್ರಯಾಣಿಕರನ್ನು ತಪಾಸಣೆಗೊಳಪಡಿಸುವಂತೆ ಸೂಚಿಸಿದೆ. ಮಂಕಿಪಾಕ್ಸ್ ಶಂಕಿತರ ಚಿಕಿತ್ಸೆಗಾಗಿ ಬೆಂಗಳೂರಿನ ಇಂದಿರಾನಗರ ಆಸ್ಪತ್ರೆ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತೆಗಳನ್ನು ಗುರುತಿಸಲಾಗಿದೆ.
ಮಂಕಿಪಾಕ್ಸ್ ಕಂಡುಬಂದಲ್ಲಿ 21 ದಿನಗಳ ಕಾಲ ಕಡ್ಡಾಯ ಕ್ವಾರಂಟೈನ್ ಮಾಡಬೇಕು. ಶಂಕಿತರ ಮೇಲೆ ನಿಗಾ ವಹಿಸಬೇಕು ಎಂದು ಸೂಚನೆ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ