Belagavi NewsBelgaum NewsKannada NewsKarnataka News

*ಕರಾವಳಿಗೆ ಮುಂಗಾರು ಪ್ರವೇಶ: ಜೂ.9ರವರೆಗೆ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ: ಇಗಾಗಲೇ ನೈಋತ್ಯ ಮುಂಗಾರು ಕೇರಳ ಕರಾವಳಿಯನ್ನು ಪ್ರವೇಶಿಸಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಮುಂಗಾರು ಮಳೆ ಚುರುಕುಗೊಳ್ಳಲಿದ್ದು, ಜೂನ್ 9 ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ  ಜೂನ್ 6 ರಿಂದ ಜೂನ್ 9 ರ ಅವಧಿಯಲ್ಲಿ ಮಳೆಯ ತೀವ್ರತೆ ಗಣನೀಯವಾಗಿ ಹೆಚ್ಚಾಗಲಿದೆ. ಈ ಭಾಗದ ಹಲವು ಜಿಲ್ಲೆಗಳಿಗೆ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಇನ್ನು ಮಲೆನಾಡು ಭಾಗದಲ್ಲೂ ಜೂನ್ 7 ರಿಂದ 9 ರವರೆಗೆ ವ್ಯಾಪಕವಾಗಿ ಮಳೆ ಸುರಿಯುವ ಸಾಧ್ಯತೆಯಿದೆ.

ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. 

ವಿಶೇಷವಾಗಿ ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಗಂಟೆಗೆ 40 ರಿಂದ 60 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು ಗುಡುಗು ಹಾಗೂ ಮಿಂಚು ಸಹಿತ ಮಳೆಯಾಗಲಿದೆ ಎಂದು ಎಚ್ಚರಿಸಲಾಗಿದೆ.

Home add -Advt

ಮುಂಗಾರು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಮತ್ತು ಸಾರ್ವಜನಿಕರು ಹವಾಮಾನ ಇಲಾಖೆಯ ಮುನ್ನೆಚ್ಚರಿಕೆಗಳನ್ನು ಗಮನಿಸಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

Related Articles

Back to top button