Belagavi NewsBelgaum NewsKannada NewsKarnataka NewsLatest

*ಮತ್ತೆ ಚುರುಕುಗೊಂಡ ಮುಂಗಾರು: ಎಲ್ಲಿ ಹೆಚ್ಚು ಮಳೆ..?*

ಪ್ರಗತಿವಾಹಿನಿ ಸುದ್ದಿ : ಇಂದಿನಿಂದ ಮುಂಗಾರು ಮಳೆ ಚುರುಕುಗೊಂಡಿದ್ದು ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ 3-4 ದಿನ ಮಳೆಯಾಗಲಿದೆ.

Home add -Advt

ಚಾಮರಾಜನಗರ, ಬೆಂಗಳೂರು ನಗರ,ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ವಿಜಯನಗರ, ರಾಮನಗರ, ಮೈಸೂರು, ಮಂಡ್ಯ ದಾವಣಗೆರೆ, ಬೆಳಗಾವಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಿದೆ.

ಆಗಸ್ಟ್ 6ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಗದಗ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಅಗಸ್ಟ್ 7ರಂದು ಕರಾವಳಿ ಜಿಲ್ಲೆಗಳು, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ, ಕೊಡಗು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದೆ.

Related Articles

Back to top button