
ಪ್ರಗತಿವಾಹಿನಿ ಸುದ್ದಿ: ಭಾರತಕ್ಕೆ ಮೇ 14ರಿಂದ 16ರೊಳಗೆ ಮುಂಗಾರು ಪ್ರವೇಶಿಸಲಿದೆ. ಈ ತಿಂಗಳು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ದೇಶಾದ್ಯಂತ ತಾಪಮಾನ ಹೆಚ್ಚಳವಾಗಿದ್ದು, ಅಲ್ಲಲ್ಲಿ ಮಳೆಯಾಗುತ್ತಿದ್ದರೂ ಬಿಸಿಲಿನ ಧಗೆ ಕಡಿಮೆಯಾಗಿಲ್ಲ. ಈ ಬಾರಿ ಮೇ 14-16ರೊಳಗೆ ಮುಂಗಾರು ಪ್ರವೇಶಿಸಲಿದ್ದು, ಮೇ ತಿಂಗಳಲ್ಲಿ ಹೆಚ್ಚು ಮಳೆಯಾಗಲಿದೆ.
ಮೇ 14ರಿಂದ 16ರೊಳಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ನೈಋತ್ಯ ಮಾನ್ಸೂನ್ ಆಗಮನವಾಗಲಿದೆ. ಹಿಮಾಲಯದ ತಪ್ಪಲಿನ ಭಾಗಗಳು, ಪೂರ್ವ ಕರಾವಳಿ ರಾಜ್ಯಗಳು, ಗುಜರಾತ್, ಮಹಾರಾಷ್ಟ್ರಗಳಲ್ಲಿ ಈ ತಿಂಗಳಲ್ಲಿ ಹೆಚ್ಚಿನ ಉಷ್ಣ ಹವಾಮಾನ ಮುಂದುವರೆಯುವ ಸಾಧ್ಯತೆ ಇದೆ ಪೂರ್ವ, ಈಶಾನ್ಯ, ಪೂರ್ವ ಮಧ್ಯ ಭಾರತದ ಕೆಲ ಭಾಗಗಳಲ್ಲಿ ಈ ತಿಂಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಲಿದೆ. ಉಳಿದೆಡೆ ಹೆಚ್ಚು ಮಳೆಯಾಗಲಿದೆ ಎಂದು ತಿಳಿಸಿದೆ.




