Belagavi NewsBelgaum NewsKannada NewsKarnataka NewsLatest

*ರಾಜ್ಯಾದ್ಯಂತ ಚುರುಕುಗೊಂಡ ಮುಂಗಾರು: ವಾರವಿಡೀ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ : ರಾಜ್ಯಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು ಮುಂದಿನ 7 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಜೂನ್ 10ರವರೆಗೂ ಉತ್ತಮ ಮಳೆಯ ನಿರೀಕ್ಷೆ ಇದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಕರಾವಳಿ ಮತ್ತು ಮಲೆನಾಡಿನ ಹಲವು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. 

Home add -Advt

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಜೂನ್ 9ರವರೆಗೆ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಸೇರಿದಂತೆ ಹಲವು ಭಾಗಗಳಲ್ಲಿ ಜೂನ್ 11ರವರೆಗೆ ‘ಯೆಲ್ಲೋ ಅಲರ್ಟ್ ಇರಲಿದ್ದು, ಗುಡುಗು ಸಹಿತ ಚದುರಿದ ಮಳೆಯಾಗಲಿದೆ.

ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. 

Related Articles

Back to top button