Kannada NewsKarnataka NewsLatest

ಹಿಂಗಾರು ಮಳೆ ಮತ್ತೆ ಪ್ರಾರಂಭವಾಗುವ ಸೂಚನೆ: ಹವಾಮಾನ ಇಲಾಖೆ ಎಚ್ಚರಿಕೆ

02.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಪ್ರಗತಿವಾಹಿನಿ ಸುದ್ದಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವದ ಮೇಲೆ ಮಳೆಯ ಪ್ರಮಾಣದಲ್ಲಿ ಹೆಚ್ಚು ಕಡಿಮೆ ಇರಬಹುದು.

ಈಗಿನಂತೆ ನವೆಂಬರ್ 2ರಿಂದ ಮಳೆ ಕಡಿಮೆಯಾಗುವ ಸಾಧ್ಯತೆಗಳಿದ್ದರೂ ನವೆಂಬರ್ 4ರ ತನಕ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನವೆಂಬರ್ 2ರಿಂದ ಕಡಿಮೆಯಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ನವೆಂಬರ್ 2ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿದ್ದು, ನವೆಂಬರ್ 4ರ ತನಕ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ 

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಇದ್ದು. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ (ಗುಂಡ್ಲುಪೇಟೆ ಸಹಿತ) ಗುಡುಗು ಸಹಿತ ಸಂಜೆ ಉತ್ತಮ ಮಳೆಯ ಮುನ್ಸೂಚನೆ ಇದ್ದು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣ ಇರಬಹುದು. 

ಈಗಿನಂತೆ ಈ ಮಳೆಯು ನವೆಂಬರ್ 3ರ ತನಕ ಮುಂದುವರಿಯುವ ಮುನ್ಸೂಚನೆ ಇದೆ.

ನವೆಂಬರ್ 5 ರ ಸುಮಾರಿಗೆ ಬಂಗಾಳಕೊಲ್ಲಿಯ ಅಂಡಮಾನ್ ಕರಾವಳಿ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಸಾಧ್ಯತೆಗಳಿರುವುದರಿಂದ ಮಳೆ ಕಡಿಮೆಯಾದರೂ ನವೆಂಬರ್ 9 ಅಥವಾ 10ರಿಂದ ದಕ್ಷಿಣ ಕರ್ನಾಟಕದಲ್ಲಿ ಹಿಂಗಾರು ಮಳೆ ಮತ್ತೆ ಪ್ರಾರಂಭವಾಗುವ ಸೂಚನೆಗಳಿವೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button