Belagavi NewsBelgaum NewsKannada NewsKarnataka NewsNationalPolitics

*ಮುಂಗಾರು ಮಳೆ ಆರ್ಭಟ: ಬೆಳಗಾವಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ : ಕರ್ನಾಟಕದಲ್ಲಿ ಈಗಾಗಲೇ ಮುಂಗಾರು ಆರ್ಭಟ ಆರಂಭವಾಗಿದ್ದು ಬೆಳಗಾವಿ ಸೇರಿದಂತೆ ರಾಜ್ಯದ 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ವಾರಕ್ಕೂ ಮುನ್ನವೇ ಆಗಮಿಸಿದ್ದು ಎಲ್ಲೆಡೆ ಉತ್ತಮ ಮಳೆಯಾಗುತ್ತಿದೆ. ಅಲ್ಲದೇ ಮುಂದಿನ ಒಂದು ವಾರಗಳ ಕಾಲ ರಾಜ್ಯದ ಹಲವೆಡೆ ಬಿಟ್ಟು ಬಿಡದೇ ಮಳೆ ಆಗಲಿದ್ದು, ಹವಾಮಾನ ಇಲಾಖೆ 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

Home add -Advt

ಹವಾಮಾನ ಇಲಾಖೆಯ ಪ್ರಕಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದರೆ, ಕೊಡಗು, ಹಾಸನ, ವಿಜಯಪುರಕ್ಕೆ ಆರೆಂಜ್ ಅಲರ್ಟ್, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ಮೈಸೂರು, ವಿಜಯನಗರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಮಳೆಯಾಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎರಡು ದಿನ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Related Articles

Back to top button