
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಈ ಬಾರಿ ಅವಧಿಗೂ ಮುನ್ನವೇ ಮುಂಗಾರು ಮಳೆ ಆರಂಭವಾಗಲಿದೆ. ಮೇ ಅಂತ್ಯಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ವಾಡಿಕೆಯಂತೆ ಜೂನ್ 1 ಅಥವಾ ಬಳಿಕ ಕೇರಳಕ್ಕೆ ಮುಂಗಾರು ಪ್ರವೇಶಿಸುತ್ತಿತ್ತು. ಆದರೆ ಈಬಾರಿ ಮೇ 27ರಂದೇ ಕೇರಳಕ್ಕೆ ಮುಂಗಾರು ಪ್ರವೇಶವಾಗಲಿದ್ದು, ಮೂರು ದಿನಗಳ ಬಳಿಕ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ.
ಹಾಗಾಗಿ ರಾಜ್ಯದಲ್ಲಿ ಈ ತಿಂಗಳಾಂತ್ಯಕ್ಕೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಮೇ 27ಕ್ಕೆ ಮುಂಗಾರು ಕೇರಳ ಪ್ರವೇಶಿಸುತ್ತಿದ್ದು, ಮೂರು ದಿನಗಳಲ್ಲಿ ಮಂಗಳೂರು, ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು ಪ್ರವೇಶಿಸಲಿದೆ. ಈಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ತಿಳಿಸಿದೆ.
ಈಗಾಗಲೇ ಅಸನಿ ಚಂಡಮಾರುತದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಅಸನಿ ಚಂಡಮಾರುತದ ಅಬ್ಬರ ಕ್ಷೀಣಿಸಿದೆ. ಆದರೆ ಇನ್ನೂ ನಾಲ್ಕುದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಬಿಜೆಪಿ ಕೋರ್ ಕಮಿಟಿ ಸಭೆ ಆರಂಭ; ಕುತೂಹಲ ಮೂಡಿಸಿದ ಚರ್ಚೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ