Kannada NewsLatestNational
*ಮೊಂಥಾ ಚಂಡಮಾರುತದ ಎಚ್ಚರಿಕೆ: ಕರ್ನಾಟಕ, ಆಂಧ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಲರ್ಟ್ ಘೋಷಣೆ: ಈ ಜಿಲ್ಲೆಯಲ್ಲಿ ಶಾಲಾ-ಕಾಲೇಜಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ ಮೊಂಥಾ ಚಂಡಮಾರುತ ಅಪ್ಪಳಿಸಿದೆ. ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಅಲ್ಲೋಲಕಲ್ಲೋಲ ಸೃಷ್ಟಿಯಾಗುತ್ತಿದೆ. ಈ ನಡುವೆ ಮೊಂಥಾ ಚಂಡಮಾರುತ ಆಂಧ್ರಪ್ರದೇಶದ ಕರಾವಳಿಯತ್ತ ಧಾಂಗುಡಿ ಇಟ್ಟಿದೆ.
ಮೊಂಥಾ ಚಂಡಮಾರುತ ಆಂಧ್ರಪ್ರದೇಶ, ಕರ್ನಾಟಕ, ಕೇರಳ, ಒಡಿಶಾ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಬಿರುಗಾಳಿ, ಮಳೆ ಅವಾಂತರಗಳನ್ನು ಸೃಷ್ಟಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ನಾಳೆ ಸಂಜೆ ಅಥವಾ ರಾತ್ರಿ ವೇಳೆಗೆ ಮೊಂಥಾ ಚಂಡಮಾರುತ ಆಂಧ್ರದ ಮಚಲಿಪಟ್ಟಣ, ಕಳಿಂಗ ಪಟ್ಟಣ ನಡುವಿನ ಕಾಕಿನಾಡ ಬಳಿ ಸಮುದ್ರ ತೀರಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ. 90ರಿಂದ 100 ಕೀ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಕಾಕಿನಾಡ ಜಿಲ್ಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಇಂದಿನಿಂದ 5 ದಿನಗಳ ಕಾಲ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮುಂಜಾಗೃತಾ ಕ್ರಮವಾಗಿ ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್, ರಕ್ಷಣಾ ಸಿಬ್ಬಂದಿಗಳನ್ನು ನೇಮಿಸಲಾಗಿದೆ.




