
ಪ್ರಗತಿವಾಹಿನಿ ಸುದ್ದಿ: ಆಂಧ್ರಪ್ರದೇಶ, ಒಡಿಶಾ, ತಮಿಳುನಾಡಿನಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿ ಮಾಡಿರುವ ಮೊಂಥಾ ಚಂಡಮಾರುತದ ಅಬ್ಬರ ನಾಳೆ ಕರ್ನಾಟಕಕ್ಕೆ ಮತ್ತಷ್ಟು ಪರಿಣಾಮ ಬೀರಲಿದ್ದು ಹಲವು ಜಿಲ್ಲೆಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.
ಮೊಂಥಾ ಚಂಡಮಾರುತದಿಂದಾಗಿ ಕರ್ನಾಟಕದ ಹವಾಮಾನದಲ್ಲಿಯೂ ಸಾಕಷ್ಟು ಬದಲಾವಣೆಗಳಾಗಿದ್ದು, ಹಲವೆಡೆ ಬಿರುಗಾಳಿ ಮಳೆಯಾಗುತ್ತಿದ್ದರೆ, ಮತ್ತೆ ಹಲವೆಡೆ ದಟ್ಟ ಮೋಡಕವಿದ ವಾತಾವರಣ ಜಿಟಿಜಿಟಿ ಮಳೆಯಾಗುತ್ತಿದೆ. ಇನ್ನು ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನಾಳೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಬಿರುಗಾಳಿ ಬೀಸಲಿದೆ.
ಚಂಡಮಾರುತದ ಅಬ್ಬರದಿಂದಾಗಿ ನಾಳೆ ಕರಾವಳಿ ಜಿಲ್ಲೆಗಳಲ್ಲಿ ಗಾಳಿತ ತೀವ್ರತೆ ಹೆಚ್ಚಾಗಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣದಜೊತೆ ಸಣ್ಣ ಮಳೆಯಾಗುವ ಸಾಧ್ಯತೆ ಇದೆ.
ಕೋಲಾರ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆ ಹಾಗೂ ಕರ್ನಾಟಕ ಉತ್ತರ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



