Latest

*ನೈತಿಕ ಪೊಲೀಸ್ ಗಿರಿ ತಡೆಗೆ ಆ್ಯಂಟಿ ಕಮ್ಯೂನಲ್ ವಿಂಗ್ ಸ್ಥಾಪನೆ*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ನೈತಿಕ ಪೊಲಿಸ್ ಗಿರಿ ತಡೆಗಟ್ಟುವ ನಿಟ್ಟಿನಲ್ಲಿ ಆಂಟಿ ಕಮ್ಯೂನಲ್ ವಿಂಗ್ ಸ್ಥಾಪನೆ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಡಾ.ಜಿ.ಪರಮೇಶ್ವರ್, ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್ ಗಿರಿ ಹೆಚ್ಚಾಗಿದೆ. ಭಯದ ವಾತಾವರಣವಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ನೈತಿಕ ಪೊಲೀಸ್ ಗಿರಿ ವಿರುದ್ಧ ಪೊಲೀಸರು ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವುವಂತೆ ಸೂಚಿಸಲಾಗಿದೆ. ಇಂತಹ ಪ್ರಕರಣ ತಡೆಯಲು ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಆಂಟಿ ಕಮ್ಯೂನಲ್ ವಿಂಗ್ ಹೊಸ ಘಟಕ ಸ್ಥಾಪನೆಯಾಗಲಿದೆ. ಆಂಟಿ ಕಮ್ಯೂನಲ್ ವಿಂಗ್ ನಲ್ಲಿ ಸಮರ್ಥ ಅಧಿಕಾರಿಗಳು ಇರಲಿದ್ದಾರೆ ಎಂದರು.

Home add -Advt

ಆಗಸ್ಟ್ 15ರೊಳಗೆ ಕರಾವಳಿ ಭಾಗ ಡ್ರಗ್ಸ್ ಮುಕ್ತ ಪ್ರದೇಶವಾಗಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇನ್ನು ಕೋಮುಧ್ವೇಷಕ್ಕೆ ಬಲಿಯಾದ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡಲಾಗುತ್ತದೆ. ದೀಪಕ್ ರಾವ್, ಪಾಝಿಲ್, ಜಲೀಲ್, ಮಸೂದ್ ಕುಟುಂಬಕ್ಕೆ ಪರಿಹಾರ ನೀಡಲಾಗುವುದು ಎಂದು ಹೇಳಿದರು.

https://pragati.taskdun.com/mla-raju-kageharrasmentbelagaviaccusedgrama-panchayat-mamber/

Related Articles

Back to top button