ಪ್ರಗತಿವಾಹಿನಿ ಸುದ್ದಿ: ಶಾರ್ಟ್ ಸರ್ಕ್ಯೂ ನಿಂದಾಗಿ ವಸತಿ ಶಾಲೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ವಿಜಯಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆಯ ಮುದ್ದೆಬಿಹಾಳ ತಾಲೂಕಿನ ಘಾಳಪೂಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಬೆಂಕಿ ಅವಘಡದಲ್ಲಿ ಸಾಗರ್, ಸಮರ್ಥ್, ಮಲ್ಲಿಕಾರ್ಜುನ್ ಎಂಬ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಘಟನೆ ಸಂಭವಿಸಿದಾಗ ಶಾಲೆಯ ಕೊಠಡಿಯಲ್ಲಿ 18 ವಿದ್ಯಾರ್ಥಿಗಳು ಇದ್ದರು. ವಸತಿ ಶಾಲೆ ಉದ್ಘಾಟನೆಯಾಗಿ ಕೇವಲ 6 ತಿಂಗಳಾಗಿದೆ. ಆಗಲೇ ಶಾರ್ಟ್ ಸರ್ಕ್ಯೂಟ್ ಅವಘಡ ಸಂಭವಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ