Kannada NewsKarnataka NewsLatest
ಗ್ರಾಮೀಣ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿ ಕಾಮಗಾರಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆದಿವೆ.
ಗೋಜಗಾ ಗ್ರಾಮದ ಸ್ಮಶಾನ ಭೂಮಿಯ ಸುತ್ತಮುತ್ತಲಿನ ಕಾಂಕ್ರೀಟ್ ರಸ್ತೆಯ ಕಾಮಗಾರಿಗಳು ಪೂರ್ಣಗೊಂಡಿದ್ದು, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗ್ರಾಮಸ್ಥರಿಗೆ ನೀಡಿದ್ದ ಭರವಸೆ ಈಡೇರಿಸಿದ್ದಾರೆ.
ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಸಿಮೆಂಟ್ ರಸ್ತೆ ನೋಡಿ ಗ್ರಾಮಸ್ತರು ಹರ್ಷಗೊಂಡಿದ್ದಾರೆ.

ಶಾಲಾ ಕೊಠಡಿ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದಲ್ಲಿ ಸುಮಾರು 19 ಲಕ್ಷ ರೂ. ಗಳ ವೆಚ್ಚದಲ್ಲಿ ಸರ್ಕಾರಿ ಶಾಲೆಗೆ ಹೆಚ್ಚುವರಿ ಎರಡು ಕೊಠಡಿಗಳ ನಿರ್ಮಾಣದ ಗುದ್ದಲಿ ಪೂಜೆ ನಡೆಯಿತು.
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅನುಪಸ್ಥಿತಿಯಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನ ಪ್ರತಿನಿಧಿಗಳು, ಯುವರಾಜ ಕದಂ ಹಾಗೂ ಶಾಲಾ ಸಿಬ್ಬಂದಿ ಸೇರಿ ಅಧಿಕೃತವಾಗಿ ಚಾಲನೆಯನ್ನು ನೀಡಿದರು.
ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಸಿದ್ದತೆಯನ್ನು ನಡೆಸಿದ್ದೇನೆ ಎಂದು ಹೆಬ್ಬಾಳಕರ್ ತಿಳಿಸಿದ್ದಾರೆ.


