*ಮತ್ತಷ್ಟು ಅಬ್ಬರಿಸಲಿದೆ ಮಳೆ: ಈ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಬಿಟ್ಟು ಬಿಡದೆ ಮಳೆರಾಯ ಅಬ್ಬರಿಸುತ್ತಿದ್ದಾನೆ. ಎಲ್ಲಡೆ ಹತ್ತಾರು ಅವಾಂತರಗಳು ಸಂಭವಿಸಿವೆ. ಇನ್ನೂ ಜೂ.17ರ ವರೆಗೆ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಹಾಗಾಗಿ ಕೇಲ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಗುರುವಾರ ಹಲವು ಜಿಲ್ಲೆಗಳ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಇಂದು ಕೂಡಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.
ಧಾರವಾಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಣೆ ಮಾಡಿರುವ ಹಿನ್ನೆಲೆಯಲ್ಲಿ ಶಾಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕೊಡಗಿವಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಕೂಡ ಪ್ರಾಥಮಿಕ ಹಾಗು ಪ್ರೌಢ ಶಾಲೆಗಳಿಗೆ ರಜೆ ಘೋಷನೆ ಮಾಡಲಾಗಿದೆ.
ಇನ್ನು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೂಡ ಅಂಗವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




