
ಪ್ರಗತಿವಾಹಿನಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ಮುಂದಿನ 5 ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ, ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ರಾಮನಗರ, ಚಾಮರಾಜನಗರ, ಚಿತ್ರದುರ್ಗದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ.
ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಹುತೇಕ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ. ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಹಾಗೂ ದಟ್ಟ ಮಂಜು ಆವರಿಸಲಿದೆ ಎಂದು ಅಂದಾಜಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ