ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಇನ್ನಷ್ಟು ಕಠಿಣ ನಿಯಮಗಳೊಂದಿಗೆ ಲಾಕ್ ಡೌನ್ ಇನ್ನೊಂದು ವಾರ ಮುಂದುವರಿಯಲಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉನ್ನತ ಮಟ್ಟದ ಸಭೆಯ ನಂತರ ಈ ಮಾಹಿತಿ ನೀಡಿದ್ದಾರೆ.
ಈ 11 ಜಿಲ್ಲೆಗಳಲ್ಲಿ ಇನ್ನಷ್ಟು ಕಠಿಣ ನಿಯಮ ಜಾರಿಗೊಳಿಸುವ ಅಧಿಕಾರವನ್ನು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ.
ಉಳಿದ ಜಿಲ್ಲೆಗಳಲ್ಲಿ ಜೂನ್ 21ರ ವರೆಗೆ ಲಾಕ್ ಡೌನ್ ನಿಯಮಗಳಲ್ಲಿ ಸಡಿಲಿಕೆ ಮಾಡಲಾಗಿದೆ. ಹಲವು ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಆದರೆ ವೀಕ್ ಎಂಡ್ ಕರ್ಫ್ಯೂ ರಾಜ್ಯಾದ್ಯಂತ ಜಾರಿಯಲ್ಲಿರುತ್ತದೆ.
ಚಿಕ್ಕಮಗಳೂರು, ಶಿವಮೊಗ್ಗ ಕೊಡಗು, ಹಾಸನ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ದಾವಣಗೆರೆ ಮಂಡ್ಯ, ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಿಯಮ ಈಗಿನಂತೆ ಮುಂದುವರಿಯಲಿದೆ. ಅದನ್ನು ಇನ್ನಷ್ಟು ಕಠಿಣಗೊಳಿಸಲೂ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.
ಪ್ರಗತಿವಾಹಿನಿ ಮಧ್ಯಾಹ್ನವೇ ಈ ಕುರಿತು ಸುಳಿವು ನೀಡಿತ್ತು.
ಬೆಳಗಾವಿ ಸೇರಿ 8 ಜಿಲ್ಲೆಗಳಲ್ಲಿ ಲಾಕ್ ಡೌನ್ ವಿಸ್ತರಣೆ; ಇನ್ನಷ್ಟು ಕಠಿಣ ನಿಯಮ?
ಮುಂದಿನ ಲಾಕ್ ಡೌನ್: ಏನಿರುತ್ತೆ, ಏನಿರಲ್ಲ? ಇಲ್ಲಿದೆ ವಿವರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ