
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಧರ್ಮಸ್ಥಳದ ಘಟನೆಗಳಿಗೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ ರಚನೆ ಮಾಡಿದ್ದು, ಈ ತಂಡದಲ್ಲಿ 20ಕ್ಕೂ ಅಧಿಕ ಹೆಚ್ಚುವರಿ ಅಧಿಕಾರಿಗಳ ನೇಮಕ ಮಾಡಲಾಗಿದೆ.
ಡಾ.ಪ್ರಣವ್ ಮೊಹಂತಿ ನೇತೃತ್ವದಲ್ಲಿ ಎಸ್‌ಐಟಿಯನ್ನು ರಚನೆ ಮಾಡಿ ಆದೇಶ ಹೊರಡಿಸಿದ್ದು ಎಸ್‌ಐಟಿ ಸದಸ್ಯರಾಗಿ ಅನುಚೇತ್, ಸೌಮ್ಯಲತಾ, ಜಿತೇಂದ್ರಕುಮಾರ್ ಸೇರಿದಂತೆ ಕೆಲವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಇದೀಗ ಹೆಚ್ಚುವರಿಯಾಗಿ ಖಡಕ್ 20 ಅಧಿಕಾರಿಗಳನ್ನು ಸರ್ಕಾರ ನೇಮಿಸಿದೆ ಎನ್ನಲಾಗಿದೆ.