
ಪ್ರಗತಿವಾಹಿನಿ ಸುದ್ದಿ: ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಹೆಚ್ಚು ಜನರಿಗೆ ಫುಡ್ ಪಾಯಿಸನ್ ಆಗಿದ್ದು, ಅಸ್ವಸ್ಥಗೊಂಡವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಾಗಿದೆ.
ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಸಮೀಪದ ಕಾಲಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮದುವೆ ಸಮಾರಂಭದಲ್ಲಿ ಶುಕ್ರವಾರ ರಾತ್ರಿ ಊಟ ಸೇವಿಸಿದ 30 ಜನ ಪುಡ್ ಪಾಯಿಸನ್ ಆಗಿದೆ. ಕೂಡಲೇ ಭರಮಸಾಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಬೆಳಗ್ಗೆ ಸಹ ಐವರಿಗೆ ಪುಡ್ ಪಾಯಿಸನ್ ಎಫೆಕ್ಟ್ ಕಂಡುಬಂದಿದ್ದು, ಅವರನ್ನು ಸಹ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆ ಜಿಲ್ಲಾಸ್ಪತ್ರೆಗೆ ಮಾಯಕೊಂಡ ಶಾಸಕ ಬಸವಂತಪ್ಪ ಭೇಟಿ ನೀಡಿ ಅಸ್ವಸ್ಥರ ಆರೋಗ್ಯ ವಿಚಾರಿಸಿದ್ದಾರೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ