*ಶಿಕ್ಷಕನ ಮೋಬೈಲ್ ನಲ್ಲಿ 300 ಕ್ಕೊ ಹೆಚ್ಚು ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಪತ್ತೆ*
ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಗಳನ್ನು ಮುಟ್ಟಿ ದೌರ್ಜನ್ಯವೆಸಗಿದ್ದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಸರ್ಕಾರಿ ಶಾಲೆಯ ಕಾಮುಕ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.
ಶಿಕ್ಷಕ ಮೊಹಮ್ಮದ್ ಸಾದಿಕ್ ಮಿಯಾ ಬೇಗ್ ಬಂಧಿತ ಆರೋಪಿ. ಮೊಹಮ್ಮದ್ ಸಾದಿಕ್ ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಗಳನ್ನು ಮುಟ್ಟಿ ವಿಕೃತಿ ಮೆರದಿದ್ದಾನೆ. ಅಲ್ಲದೇ, ಶೌಚಕ್ಕೆ ಹೋಗುತ್ತಿದ್ದಾಗ ಖಾಸಗಿ ಅಂಗಾಂಗದ ಫೋಟೋ ತೆಗೆದುಕೊಂಡು ಬರುವಂತೆ ವಿದ್ಯಾರ್ಥಿನಿಯರಿಗೆ ಶಿಕ್ಷಕ ಮೊಹಮ್ಮದ್ ಸಾದಿಕ್ ಹೇಳುತ್ತಿದ್ದನು. ಈ ಫೋಟೋಗಳನ್ನು ತನ್ನ ಮೊಬೈಲ್ನಲ್ಲಿ ಸೇವ್ ಮಾಡಿಕೊಂಡಿದ್ದನು.
ಶಿಕ್ಷಕ ಮೊಹಮ್ಮದ್ ಸಾದಿಕ್ ಪಾಠ ಮಾಡುವುದನ್ನು ಬಿಟ್ಟು ಕಾಮುಕನಾಗಿ ವಿಕೃತವಾಗಿ ವರ್ತಿಸುತ್ತಿದ್ದನು. ಶಿಕ್ಷಕ ಮೊಹಮ್ಮದ್ ಸಾದಿಕ್ ಕಳೆದ ಒಂದು ವರ್ಷದಿಂದ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥನಿಯರ ಮೇಲೆ ದೌರ್ಜನ್ಯವೆಸಗಿದ್ದಾನೆ. ಬಂಧಿತ ಶಿಕ್ಷಕ ಮೊಹಮ್ಮದ್ ಸಾದಿಕ್ ಮೊಬೈಲ್ನಲ್ಲಿ 300ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಹಾಗೇ ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಳ ಫೋಟೋಗಳು ಕೂಡ ಪತ್ತೆಯಾಗಿವೆ. ಶಿಕ್ಷಕ ಮೊಹಮ್ಮದ್ ಸಾದಿಕ್ ಮೊಬೈಲ್ನಲ್ಲಿ 100ಕ್ಕೂ ಹೆಚ್ಚು ಫೋಟೋಗಳು ಪತ್ತೆಯಾಗಿವೆ.
ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ..?
ಓರ್ವ ವಿದ್ಯಾರ್ಥಿನಿ ತಾಯಿಯ ಮುಂದೆ ದೌರ್ಜನ್ಯದ ಬಗ್ಗೆ ಹೇಳಿದಾಗ, ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ಮೊಹಮ್ಮದ್ ಸಾದಿಕ್ ವಿರುದ್ಧ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ