Belagavi NewsBelgaum NewsKannada NewsKarnataka News

*50ಕ್ಕೂ ಹೆಚ್ಚು ಮೊಸಳೆ ಮರಿಗಳು ಪತ್ತೆ: ತಾಯಿ ಮೊಸಳೆಗಾಗಿ ಹುಡುಕಾಟ*

ಪ್ರಗತಿವಾಹಿನಿ ಸುದ್ದಿ: ತಾಯಿ ಮೊಸಳೆ ಸೇರಿ ಸುಮಾರು 50ಕ್ಕೂ ಹೆಚ್ಚು ಮೊಸಳೆ ಮರಿಗಳು ಪ್ರತ್ಯಕ್ಷವಾದ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದೇವರಡ್ಡೆರಟ್ಟಿ ಗ್ರಾಮದಲ್ಲಿ ನಡೆದಿದ್ದು, ಮೊಸಳೆ ಮರಿಗಳನ್ನು ಅರಣ್ಯ ಇಲಾಖೆಗೆ ಒಪ್ಪಿಸಿಲಾಗಿದೆ. 

ಹಲವು ದಿನಗಳಿಂದ ಗ್ರಾಮದ ಸಮೀಪದ ಅಪ್ಪಾಸಾಬ ಸತ್ಯಪ್ಪ ನಾಯಕ ಅವರ ತೋಟದ ಕೃಷಿ ಹೊಂಡದಲ್ಲಿ ಠಿಕಾಣಿ ಹೂಡಿದ್ದ ಮೊಸಳೆ ಗ್ರಾಮಸ್ಥರಲ್ಲಿ ಆತಂಕ ಹುಟ್ಟಿಸಿತು. 

ಕೃಷಿಹೊಂಡದ ಸಮೀಪದ ಗದ್ದೆಯ ಬದುವಿನಲ್ಲಿ ಸುಮಾರು 50ಕ್ಕೂ ಅಧಿಕ ಮೊಸಳೆ ಮರಿಗಳು ಪ್ರತ್ಯಕ್ಷವಾಗಿವೆ. ಗ್ರಾಮಸ್ಥರು ಸುರಕ್ಷಿತವಾಗಿ ರಕ್ಷಣೆ ಮಾಡಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿದ್ದು, ತಾಯಿ ಮೊಸಳೆಯನ್ನ ಸೆರೆ ಹಿಡಿಯುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button