Politics

*ಮಹಾರಾಷ್ಟ್ರಕ್ಕೆ ಪ್ರತಿದಿನ 500 ಕ್ಕೂ ಹೆಚ್ಚು ಟ್ರಕ್ ಮರಳು: ಬಿ.ವೈ ವಿಜಯೇಂದ್ರ ಆರೋಪ*

ಪ್ರಗತಿವಾಹಿನಿ ಸುದ್ದಿ :  ಕಲಬುರಗಿ ಮತ್ತು ಸುತ್ತಮತ್ತಲಿನ ಜಿಲ್ಲೆಗಳಲ್ಲಿ ಮರಳು ಮಾಫಿಯಾ ಎಲ್ಲೆ ಮೀರಿದೆ. ಪ್ರತಿದಿನ 500 ಕ್ಕೂ ಹೆಚ್ಚು ಟ್ರಕ್ ತುಂಬಾ ಮರಳು ಮಹಾರಾಷ್ಟ್ರಕ್ಕೆ ರವಾನೆಯಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪಿಸಿದ್ದಾರೆ.

ಕಲಬುರಗಿಯಲ್ಲಿ ಇಂದು ಜನಾಕ್ರೋಶ ಯಾತ್ರೆಯಲ್ಲಿ ಭಾಗವಹಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಇಷ್ಟೆಲ್ಲಾ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಕೈಕಟ್ಟಿ ಕುಳಿತಿದೆ. ಬಿಜೆಪಿ ಈ ವಿರುದ್ದ ಭಾರೀ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಕೆ ನೀಡಿದರು.

ಕಾಂಗ್ರೆಸ್ ಸರ್ಕಾರದ ಬೆಲೆಯೇರಿಕೆ ಹಾಗೂ ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿಯನ್ನು ಖಂಡಿಸಿ ಇಂದು ಕಲಬುರಗಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಸ್ಥಳೀಯ ಮುಖಂಡರು, ಕಾರ್ಯಕರ್ತರು ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button