*ಸರ್ಕಾರಿ ನೌಕರರ 5 ಸಾವಿರಕ್ಕೂ ಅಧಿಕ ಬಿಪಿಎಲ್ ಕಾರ್ಡ್ ಅನರ್ಹ; ಸೂಕ್ತ ಕ್ರಮಕ್ಕೆ ಸಿಎಂ ಸೂಚನೆ*
ಪ್ರಗತಿವಾಹಿನಿ ಸುದ್ದಿ: ಸುಮಾರು 5 ಸಾವಿರಕ್ಕೂ ಅಧಿಕ ಸರ್ಕಾರಿ ನೌಕರರೂ ಬಿಪಿಎಲ್ ಕಾರ್ಡ್ ಹೊಂದಿರುವುದು ಬೆಳಕಿಗೆ ಬಂದಿದ್ದು, ಅಂಥವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಈ ಕುರಿತು ಕರ್ನಾಟಕ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಷಡಕ್ಷರಿ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ ಕೆಲ ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಸೌಲಭ್ಯ ಪಡೆಯುತ್ತಿರುವ ಆರೋಪಗಳು ಕೇಳಿ ಬಂದಿದ್ದವು. ನಿಜವಾಗಲೂ ಬಿಪಿಎಲ್ ಕಾರ್ಡ್ ಗಳ ಮೂಲಕ ಬಡವರಿಗೆ ಸರ್ಕಾರಿ ಯೋಜನೆಗಳು ತಲುಪಬೇಕು.
ಇತ್ತೀಚೆಗೆ ಸರ್ಕಾರಿ ನೌಕರಿ ಪಡೆದುಕೊಂಡ ಕೆಲವರು ಸರ್ಕಾರಿ ಕೆಲಸ ಸಿಗುವ ಮೊದಲೇ ಬಿಪಿಎಲ್ ಕಾರ್ಡ್ ಹೊಂದಿರುತ್ತಾರೆ. ಅಂತವರು ಸರ್ಕಾರಕ್ಕೆ ಬಿಪಿಎಲ್ ಕಾರ್ಡ್ ಹಿಂದಿರುಗಿಸುವುದನ್ನು ಮರೆತಿರುತ್ತಾರೆ. ಇನ್ನು ಕೆಲವರು ಸರ್ಕಾರಿ ಸೇವೆಗೆ ಸೇರಿದರೂ ಬಿಪಿಎಲ್ ಕಾರ್ಡ್ ಸರ್ಕಾರಕ್ಕೆ ಹಿಂದಿರುಗಿಸಿರಲ್ಲ. ಕೆಲವರು ಕಾರ್ಡ್ ಸರ್ಕಾರಕ್ಕೆ ವಾಪಸ್ ನೀಡಿರುತ್ತಾರೆ ಎಂದು ಷಡಕ್ಷರಿ ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ