ಕಲುಷಿತ ನೀರು ಕುಡಿದು 80ಕ್ಕೂ ಹೆಚ್ಚು ಜನ ಅಸ್ವಸ್ಥ

ಪ್ರಗತಿವಾಹಿನಿ ಸುದ್ದಿ, ರಾಯಚೂರು: ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಚಿತ್ತಾಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 80ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ. ಈ ಗ್ರಾಮದಲ್ಲಿ ಸುಮಾರು 3 ಸಾವಿರ ಜನಸಂಖ್ಯೆಯಿದ್ದು ಚರಂಡಿ ನೀರು ಕುಡಿಯುವ ನೀರಿಗೆ ಮಿಶ್ರಣಗೊಂಡಿದ್ದರಿಂದ ಈ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ. ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿದ ಘಟನೆ ಬೆನ್ನಿಗೇ ಈ ಘಟನೆ ನಡೆದಿರುವುದು ಆತಂಕ ಸೃಷ್ಟಿಸಿದೆ. ನೀರು ಸೇವಿಸಿ ಅಸ್ವಸ್ಥರಾದ ಅನೇಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನಷ್ಟು ಜನ ಮನೆಯಲ್ಲೇ … Continue reading ಕಲುಷಿತ ನೀರು ಕುಡಿದು 80ಕ್ಕೂ ಹೆಚ್ಚು ಜನ ಅಸ್ವಸ್ಥ