ತುರ್ತು ಸಚಿವಸಂಪುಟ ಸಭೆ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ಕ್ಷಣ ಕ್ಷಣಕ್ಕೂ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ತುರ್ತು ಸಚಿವಸಂಪುಟ ಸಭೆ ಕರೆಯಲಾಗಿದೆ.
ರಾಜ್ಯದಲ್ಲಿ ದಿನಕ್ಕೆ 25 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ದೃಢಪಡುತ್ತಿದ್ದು, ನೂರಾರು ಮಂದಿ ಸಾವಿಗೀಡಾಗುತ್ತಿದ್ದಾರೆ. ಹಾಗಾಗಿ ತುರ್ತಾಗಿ ನಿಯಂತ್ರಣಕ್ಕೆ ತರಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಸಧ್ಯಕ್ಕೆ ಜನರಿಗೆ ತೊಂದರೆಯಾದರೂ ಜನರ ಜೀವ ಉಳಿಯುವುದು ಮುಖ್ಯ ಹಾಗೂ ಟಫ್ ರೂಲ್ಸ್ ಜಾರಿಗೊಳಿಸಿ. ರೂಲ್ಸ್ ಮುರಿಯುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ ಎಂದು ಸಿಎಂ ಆದೇಶಿಸಿದ್ದಾರೆ.
ಈಗಿನ ಎಲ್ಲ ಬೆಳವಣಿಗೆಗಳ ಕುರಿತು ಚರ್ಚಿಸಲು ಸೋಮವಾರ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಚರ್ಚಿಸಿ ಮುಂದೆ ಇನ್ನಷ್ಟು ಕಠಿಣ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಜನರು ಎಚ್ಚೆತ್ತು ಸ್ವಯಂ ನಿಯಂತ್ರಣ ಹೇರದಿದ್ದರೆ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಲಿದೆ. ಸಚಿವರು ಹಾಗೂ ಶಾಸಕರಿಗೂ ಅವರವರ ಕ್ಷೇತ್ರ, ಜಿಲ್ಲೆಗಳ ಜವಾಬ್ದಾರಿ ನೀಡುವ ಸಾಧ್ಯತೆಯೂ ಇಲ್ಲದಿಲ್ಲ.
ವೀಕೆಂಡ್ ಕರ್ಫ್ಯೂ ಮುಗಿಯುತ್ತಿದ್ದಂತೆ ಬಿಗ್ ಶಾಕ್…
ಸ್ವಭಾವವನ್ನೇ ಬದಲಿಸಿ ಅಪಾಯಕಾರಿಯಾಗಿ ಹರಡುತ್ತಿದೆ ಕೊರೊನಾ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ