Kannada NewsLatest

*ಭೀಕರ ಭೂಕಂಪ; 296ಕ್ಕೂ ಹೆಚ್ಚು ಜನ ಜನರು ಬಲಿ*

ಪ್ರಗತಿವಾಹಿನಿ ಸುದ್ದಿ; ಮೊರಾಕೊ: ಮೊರಾಕೊದಲ್ಲಿ ಪ್ರಭಲ ಭೂಕಂಪ ಸಂಭವಿಸಿದ್ದು, 296ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಹಲವರು ಕಣ್ಮರೆಯಾಗಿದ್ದಾರೆ.

ಮೊರಾಕೊದಲ್ಲಿ 6.8 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದಿಂದ ಅಲ್-ಹೌಜ್, ಮರ್ರಕೇಶ್, ಔರ್ಜಾಜೆಟ್, ಅಜಿಲಾಲ್, ಚಿಚೌವಾ, ತಾರೌಡಾಂತ್ ಪ್ರಾಂತ್ಯಗಳು, ಪುರಸಭೆ ಪ್ರದೇಶಗಳಲ್ಲಿ 296 ಜನರು ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ 153 ಜನರು ಗಾಯಗೊಂಡಿದ್ದಾರೆ. ಭೂಕಂಪವು ಪ್ರವಾಸಿ ತಾಣ ಮರಕೇಶ್ ನ ನೈಋತ್ಯಕ್ಕೆ 44 ಮೈಲಿ 18.5 ಕಿ.ಮೀ ಆಳದಲ್ಲಿ ಸಂಭವಿಸಿದೆ.

ಮೊರಾಕೊದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ 296ಕ್ಕೂ ಹೆಚ್ಚು ಜನ ಸಾವನ್ನಪ್ಪಿದ ಪ್ರಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button