Belagavi NewsBelgaum NewsCrimeKannada NewsKarnataka NewsNationalPolitics
*ಹಿರಣ್ಯಕೇಶಿ ನದಿಯಲ್ಲಿ ಮುಳುಗಿ ತಾಯಿ -ಮಗು ಸಾವು*

ಪ್ರಗತಿವಾಹಿನಿ ಸುದ್ದಿ: ಈಜಲು ಹೋದ ಮಗು ನೀರಿನ ಸೆಳೆತಕ್ಕೆ ಸಿಲುಕಿದಾಗ ಮಗನನ್ನು ರಕ್ಷಿಸಲು ಹೋದ ತಾಯಿಯೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಹಿರಣ್ಯಕೇಶಿ ನದಿಯಲ್ಲಿ ನಡೆದಿದೆ.
ಸಂಕೇಶ್ವರ ಪಟ್ಟಣದ ಹಿರಣ್ಯಕೇಶಿ ನದಿ ತೀರದಲ್ಲಿ ಮಗು ಈಜಲು ಹೋದಾಗ ನೀರಿನ ಸೆಳೆತಕ್ಕೆ ಸಿಲುಕಿದೆ. ಮಗನನ್ನು ಉಳಿಸಲು ತಾಯಿ ಧೈರ್ಯದಿಂದ ನದಿಗೆ ಇಳಿದಿದ್ದಾರೆ. ಆದರೆ ವಿಧಿಯಾಟ ಬೇರೆಯೇ ಇತ್ತು, ಮಗನನ್ನು ರಕ್ಷಿಸಲು ಹೋದ ತಾಯಿಯೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ತಾಯಿಯ ಮೃತದೇಹ ಸಿಕ್ಕಿದ್ದು, ಮಗನ ಶವಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರು ತೀವ್ರ ಶೋಧ ನಡೆಸುತ್ತಿದ್ದಾರೆ. ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

