Kannada NewsKarnataka News

*ಭೀಕರ ಅಪಘಾತಕ್ಕೆ ತಾಯಿ- ಮಗಳ ಸಾವು*

ಪ್ರಗತಿವಾಹಿನಿ ಸುದ್ದಿ: ಕಾರು ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಡಿಕ್ಕಿಯಾದ ಪರಿಣಾಮ ತಾಯಿ ಹಾಗೂ ಮಗಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಇಂದು ಮದ್ದೂರು ತಾಲೂಕಿನ ರುದ್ರಾಕ್ಷಿಪುರ ಗ್ರಾಮದ ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ಮೃತರು ಬೆಂಗಳೂರಿನ ಬಾಗಲಗುಂಟೆಯ ನಿವಾಸಿ ದರ್ಶನ್ (21), ತಾಯಿ ಕಲಾ ಎಂದು ಗುರತಿಸಲಾಗಿದೆ. ಕಾರಿನಲ್ಲಿದ್ದ ಪುತ್ರಿ ಮೇಘ ಹಾಗೂ ಅಳಿಯ ಮಂಜುನಾಥ್‌ ಎಂಬುವವರಿಗೆ ಗಂಭೀರಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಕಾರನ್ನು ಮಂಜುನಾಥ್ ಚಾಲನೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

Home add -Advt

ಕುಟುಂಬ ಸಮೇತ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗಿ ಬೆಂಗಳೂರಿಗೆ ವಾಪಾಸ್ ಬರುವಾಗ ಈ ದುರ್ಘಟನೆ ಸಂಭವಿಸಿದೆ. ಮದ್ದೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Related Articles

Back to top button