
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ತಾಯಿ ಹಾಗೂ ಮಗನ ಜೋಡಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದು ಜೋಡಿ ಕೊಲೆ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಅಥಣಿ ತಾಲೂಕಿನ ಕೊಡಗಾನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಾಯಿ ಚಂದ್ರವ್ವ ಅಪ್ಪಾರಾಯ ಇಚೇರಿ (62) ವಿಠಲ್ ಅಪ್ಪರಾಯ ಇಚೇರಿ (42) ಮೃತ ದುರ್ದೈವಿಗಳು.
ಇಬ್ಬರನ್ನೂ ಕೊಲೆ ಮಾಡಿ, ಕಬ್ಬಿನ ಗದ್ದೆಯಲ್ಲಿ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ