Kannada NewsKarnataka News

*ಆತ್ಮಹತ್ಯೆ ಮಾಡಿಕೊಂಡ ತಾಯಿ-ಮಗಳು*

ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತ ಮಗಳ ಜತೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರ ಜಿಲ್ಲೆಯ ಲಿಂಗಸಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದಿದೆ.

Home add -Advt

ತಾಯಿ ಮಗಳು ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆಗೆ ಶರಣಾಗಿರೋ ಬಗ್ಗೆ ಶಂಕೆ ವ್ಯಕ್ತವಾಗಿದೆ. ಲಕ್ಷೀ (46) ಮತ್ತು ಅಂಬಿಕಾ (13)ಆತ್ಮಹತ್ಯೆಗೆ ಒಳಗಾದ ತಾಯಿ ಮಗಳಾಗಿದ್ದಾರೆ.‌ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡ್ತಿದ್ದ ಮೃತ ತಾಯಿ-ಮಗಳು. ಇತ್ತಿಚೆಗೆ 1 ತಿಂಗಳ ಹಿಂದಷ್ಟೇ ಗ್ರಾಮಕ್ಕೆ ಬಂದಿದ್ದರು ಎನ್ನಲಾಗಿದೆ.‌

14 ವರ್ಷಗಳ ಹಿಂದೆಯೇ ಪತಿಯಿಂದ ದೂರವಾಗಿದ್ದ ಮೃತ ಲಕ್ಷ್ಮೀ, ಇದರಿಂದಾಗಿ ಸುಮಾರು ವರ್ಷಗಳಿಂದ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ.‌ ಇಂದು ಏಕಾಏಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.‌ ಮೃತ ಲಕ್ಷ್ಮೀಯ ಪುತ್ರ ಪಂಪನಗೌಡ ನೀಡಿದ ದೂರಿನನ್ವಯ, ಲಿಂಗಸಗೂರು ತಾಲೂಕಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button