Karnataka News
Trending

*ತಾಯಿ-ಮಗಳು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ*

ಪ್ರಗತಿವಾಹಿನಿ ಸುದ್ದಿ: ತಾಯಿ-ಮಗಳು ಇಬ್ಬರೂ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಇಲ್ಲಿನ ನಂಂಜನಗೂಡು ತಾಲೂಕಿನ ಕೊತ್ತನಹಳ್ಳಿಯ ನಿವಾಸದಲ್ಲಿ ಈ ದುರಂತ ಸಂಭವಿಸಿದೆ. ಮಹದೇವಮ್ಮ (40), ಮಗಳು ಸುಪ್ರಿಯಾ (20) ಮೃತ ದುರ್ದೈವಿಗಳು.

Home add -Advt

ಮಹದೇವಮ್ಮಗೆ ಪತಿ ಜಯರಾಮ್ ನಿರಂತರವಾಗಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದನಂತೆ. ಆಗಾಗ ಪತ್ನಿ ಜೊತೆ ಜಗಳವಾಡುತ್ತಿದ್ದನಂತೆ.

ಇದರಿಂದ ಹಲವು ಬಾರಿ ಮಹದೇವಮ್ಮ ಪತಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಮನೆಯಲ್ಲಿ ತಾಯಿ ಹಾಗೂ ಮಗಳು ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಜಯರಾಮ್ ನೇ ಹತ್ಯೆಗೈದು ನೇಣು ಬಿಗಿದಿದ್ದಾಗಿ ಮಹದೇವಮ್ಮ ಕುಟುಂಬದವರು ಆರೋಪಿಸಿದ್ದಾರೆ.

ಹುಲ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Related Articles

Back to top button