Kannada NewsKarnataka NewsLatest

*ಹಂಡೆಯಲ್ಲಿ ಮುಳುಗಿಸಿ 45 ದಿನದ ಮಗುವನ್ನು ಕೊಂದ ತಾಯಿ*

ಪ್ರಗತಿವಾಹಿನಿ ಸುದ್ದಿ: 45 ದಿನದ ಮಗುವನ್ನು ಹೆತ್ತ ತಾಯಿ ಒಬ್ಬಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ.

ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ಮಗುವನ್ನು ಭೀಕರವಾಗಿ ಹತ್ಯೆಗೈದಿದ್ದಾಳೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ನಾಗಕಲ್ಲು ಎಂಬಲ್ಲಿ ಈ ದುರ್ಘಟನೆ ನಡೆದಿದೆ.

ಪವನ್ ಹಾಗೂ ರಾಧೆ ದಂಪತಿಗೆ ಈ ಒಂದು ಗಂಡು ಮಗು ಜನಿಸಿತ್ತು. ಆದ್ರೆ ಪವನ್ ಮನೆ ನಿಭಾಯಿಸದೆ ಕುಡಿತದ ಚಟಕ್ಕೆ ಒಳಗಾಗಿದ್ದ ಎನ್ನಲಾಗಿದ್ದು, ಬಡತನ ಹಾಗೂ ಮಗುವಿನ ಆರೈಕೆ ಕಷ್ಟವಾದ ಹಿನ್ನೆಲೆಯಲ್ಲಿ ತಡರಾತ್ರಿ ಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾಳೆ.

ಈ ಸಂಬಂಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿ ರಾಧಾಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪವನ್ ನನ್ನು ಸಹ ಕರೆಸಿ ವಿಚಾರಣೆ ನಡೆಸಲಾಗುತ್ತಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button