
ಪ್ರಗತಿವಾಹಿನಿ ಸುದ್ದಿ: ಮಗನ ಸಾವಿನಿಂದ ತೀವ್ರವಾಗಿ ಮನ ನೊಂದ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರವಿಕಲಾ (45) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಗುರುವಾರ ಸಂಜೆ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಭದ್ರನದಿಗೆ ಬಿದ್ದು ಕೊಚ್ಚಿ ಹೋಗಿತ್ತು. ಘಟನೆಯಲ್ಲಿ ರವಿಕಲಾ ಪುತ್ರ ಶಮಂತ್ (23) ಸಾವನ್ನಪ್ಪಿದ್ದಾನೆ.
ಇನ್ನೂ ಆತನ ಮೃತದೇಹ ಪತ್ತೆಯಾಗಿಲ್ಲ. ಮಗನ ಮೃತದೇಹ ಸಿಗುವ ಮೊದಲೇ ಮಗ ಸಾವನ್ನಪ್ಪಿದ್ದಾನೆ ಎಂಬ ಸುದ್ದಿಕೇಳಿ ಆಘಾತಗೊಂಡ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.