Kannada NewsKarnataka NewsNational

*ಕೃಷಿ ಹೊಂಡದಲ್ಲಿ ಬಿದ್ದು ತಾಯಿ, ಇಬ್ಬರು ಮಕ್ಕಳ ದಾರುಣ ಸಾವು*

ಪ್ರಗತಿವಾಹಿನಿ ಸುದ್ದಿ: ಯಾದಗಿರಿ ಜಿಲ್ಲೆಯ ವಡಿಗೇರಾ ತಾಲೂಕಿನ ಕಂಠಿ ಗ್ರಾಮದಲ್ಲಿ ಭೀಕರ ದುರಂತ ನಡೆದಿದೆ. ಕೃಷಿ ಹೊಂಡಕ್ಕೆ ಬಿದ್ದು ತಾಯಿ ಮತ್ತು ಇಬ್ಬರು ಪುಟ್ಟ ಮಕ್ಕಳು ಸಾವನ್ನಪ್ಪಿದ್ದಾರೆ.

ನೀಲಾ ಬಾಯಿ (32), ರಾಜೇಶ್ವರಿ (11) ಹಾಗೂ 6 ವರ್ಷದ ಮತ್ತೊಂದು ಹೆಣ್ಣು ಮಗು ಮೃತ ದುರ್ದೈವಿಗಳು. ನೀಲಾಬಾಯಿ ನೀರು ತರಲು ಹೋಗಿದ್ದಾಗ ಕಾಲು ಜಾರಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಗ್ರಾಮಸ್ಥರು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.

ವಡಿಗೇರಾ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹಗಳನ್ನು ವಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ವಡಿಗೇರಾ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button