
ಪ್ರಗತಿವಾಹಿನಿ ಸುದ್ದಿ: ಮಹಿಳೆಯೊಬ್ಬರು ತನ್ನ ಮೂವರು ಪುಟ್ಟ ಮಕ್ಕಳೊಂದಿಗೆ ನಾಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊಸೂರಿನಲ್ಲಿ ನಡೆದಿದೆ.
ಮಕ್ಕಳಾದ ತನುಶ್ರೀ (8), ಭೂಮಿಕಾ (6), ಯೋಗಿತಾ (4) ಜೊತೆ ತಾಯಿ ವಸಂತಕುಮಾರಿ (25) ನಾಪತ್ತೆಯಾಗಿದ್ದಾರೆ. ಚಿಕ್ಕ ಚಿಕ್ಕ ಮಕ್ಕಳೊಂದಿಗೆ ತಾಯಿ ನಾಪತ್ತೆಯಾಗಿದ್ದು, ಪೋಷಕರು ಕಂಗಾಲಾಗಿದ್ದಾರೆ.
ಕಳೆದ 15 ದಿನಗಳಿಂದ ತಾಯಿ ಹಾಗೂ ಮಕ್ಕಳ ಸುಳಿವಿಲ್ಲ. ಜನವರಿ 16ರಿಂದ ನಾಪತ್ತೆಯಾಗಿದ್ದು, ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಯಿ-ಮಕ್ಕಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ