
ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: 5 ವರ್ಷದ ಮಗುವಿನೊಂದಿಗೆ ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ದವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆರೆಬಿಳಚಿ ಬಳಿ ನಡೆದಿದೆ.
ಐತಿಹಾಸಿಕ ಪ್ರವಾಸಿ ತಾಣ ಸೂಳೆಕೆರೆಯಲ್ಲಿ ಈ ದುರಂತ ಸಂಭವಿಸಿದೆ. 5 ವರ್ಷದ ಮಗುವಿನೊಂದಿಗೆ ಸೂಳೆಕೆರೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೊನ್ನೆಬಾಗಿ ಗ್ರಮದ ಕವಿತಾ(27) ಹಾಗೂ ಪುತ್ರಿ ನಿಹಾರಿತಾ (5) ಮೃತ ಮಹಿಳೆ. ಪತಿ ಮಂಜುನಾಥ್ ನಿರಂತರ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ. ಇದರಿಂದ ನೊಂದ ಮಹಿಳೆ ಪುಟ್ಟ ಮಗಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕವಿತಾ ಪೋಷಕರು ಆರೋಪಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ