Latest

*ತಾಯಿ ಮೃತದೇಹದ ಜೊತೆ 4ದಿನ ಕಳೆದಿದ್ದ ಮಗಳೂ ಸಾವು; ಮನಕಲಕುವ ಘಟನೆ ಬೆಳಕಿಗೆ*

ಪ್ರಗತಿವಾಹಿನಿ ಸುದ್ದಿ: ಉಡುಪಿ ಜಿಲ್ಲೆಯಲ್ಲಿ ಮನಕಲಕುವ ಘಟನೆ ನಡೆದಿದೆ. ತಾಯಿಯ ಮೃತದೇಹದ ಜೊತೆ 4 ದಿನ ಕಳೆದಿದ್ದ ಮಗಳು ಕೂಡ ಸಾವನ್ನಪ್ಪಿರುವ ಘಟನೆ ನಡೆದಿದೆ.

ತಾಯಿಯ ಶವದ ಜೊತೆ 4 ದಿನಗಳಿಂದ ಅನ್ನ-ಆಹಾರ, ನೀರು ಇಲ್ಲದೇ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಬುದ್ಧಿಮಾಂದ್ಯ ಮಗಳು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೂಡುಗೋಪಾಡಿಯ ದಾಸನವಾಡಿಯಲ್ಲಿರುವ ಮನೆಯೊಂದರಲ್ಲಿ ಈ ದುರಂತ ಸಂಭವಿಸಿದೆ. ತಾಯಿ ಜಯಂತಿ ಶೆಟ್ಟಿ (62) ಹಾಗೂ ಮಗಳು ಪ್ರಗತಿ ಶೆಟ್ಟಿ (30) ಮೃತರು.

Home add -Advt

ತಾಯಿ ಜಯಂತಿ ಮಧುಮೇಹ, ರಕ್ತದೊತ್ತಡದಿಂದ ಬಳಲುತ್ತಿದ್ದರು. 3-4 ದಿನಗಳ ಹಿಂದೆ ಮನೆಯಲ್ಲಿ ಜಯಂತಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಕುಂದಾಪುರ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಗಳು ಪ್ರಗತಿ ಶೆಟ್ಟಿಯನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದರು. ಕೋಟೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗಳು ಪ್ರಗತಿ ಶೆಟ್ಟಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾಳೆ.

ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button