Latest

ಪುಟ್ಟ ಮಗನನ್ನೇ ಕೊಚ್ಚಿ ಕೊಲೆಗೈದ ಹೆತ್ತ ತಾಯಿ

ಪ್ರಗತಿವಾಹಿನಿ ಸುದ್ದಿ; ಮೈಸೂರು: 4 ವರ್ಷದ ಮಗನನ್ನೇ ತಾಯಿಯೊಬ್ಬಳು ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

4 ವರ್ಷದ ಪುಟ್ಟ ಬಾಲಕ ಶ್ರೀನಿವಾಸ್ ಕೊಲೆಯಾದ ಮಗು. ಬೂದನೂರು ಗ್ರಾಮದಲ್ಲಿ ಈ ಭೀಕರ ಘಟನೆ ನಡೆದಿದೆ. ಮಾನಸಿಕ ಅಸ್ವಸ್ಥ ತಾಯಿ ಭವಾನಿ ಎಂಬ ಮಹಿಳೆ ಪತಿ ಶಂಕರ್ ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಮಗನ್ನು ಮಚ್ಚಿನಿಂದ ಕೊಚ್ಚಿ ಹತ್ಯೆಗೈದಿದ್ದಾಳೆ.

ಹೆಚ್.ಡಿ.ಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಆರಂಭಿಸಿದ್ದಾರೆ.

 

Home add -Advt

Related Articles

Back to top button