
ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಮಕ್ಕಳಿಬ್ಬರನ್ನು ನೀರಿನಲ್ಲಿ ಮುಳುಗಿಸಿ ಕೊಂದು ಬಳಿಕ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಯಾದಲಘಟ್ಟಿ ಗ್ರಾಮದಲ್ಲಿ ನಡೆದಿದೆ.
25 ವರ್ಷದ ಲತಾ ಮಕ್ಕಳನ್ನು ಕೊಂದ ತಾಯಿ. 5 ವರ್ಷದ ಪ್ರಣೀತಾ, ಮೂರು ವರ್ಷದ ಜ್ಞಾನೇಶ್ವರ ತಾಯಿಯಿಂದಲೇ ಕೊಲೆಯಾದ ಮಕ್ಕಳು. ಇಬ್ಬರು ಮಕ್ಕಳನ್ನು ತಾಯಿ ಲತಾ, ನೀರಿನ ತೊಟ್ಟಿಯಲ್ಲಿ ಮುಳುಗಿಸಿ ಕೊಂದಿದ್ದು, ಬಳಿಕ ತಾನು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಕೌಟುಂಬಿಕ ಕಲಹವೇ ಕೃತ್ಯಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ತಾಯಿ ಹಾಗೂ ಮಕ್ಕಳ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ