Kannada NewsKarnataka NewsLatest

*ತಾಯಿ ಆತ್ಮಹತ್ಯೆ; ತಂದೆಯನ್ನು ಬರ್ಬರವಾಗಿ ಕೊಲೆಗೈದ ಮಗ*

ಪ್ರಗತಿವಾಹಿನಿ ಸುದ್ದಿ: ಪತಿಯ ಹಿಂಸೆ, ಕಿರುಕುಳಕ್ಕೆ ಮನನೊಂದ ತಾಯಿ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ತಾಯಿ ಸಾವಿಗೆ ಕಾರಣನಾದ ತಂದೆಯನ್ನೇ ಮಗ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಲಕ್ಕೀಂಪುರ ಗ್ರಾಮದಲ್ಲಿ ನಡೆದಿದೆ.

Home add -Advt

ತಪ್ಪಮ್ಮ (52) ಪತಿ ಅಂಜನಪ್ಪ ಕಿರುಕುಳಕ್ಕೆ ಬೇಸತ್ತು ನಿನ್ನೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರಿಂದ ತಾಯಿ ಸಾವಿಗೆ ತಂದೆ ಅಂಜನಪ್ಪನೇ ಕಾರಣ ಎಂದು ಸಿಟ್ಟಿಗೆದ್ದ ಮಗ ರಮೇಶ್, ತಂದೆಯ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿದ್ದಾನೆ.

ಅಂಜನಪ್ಪ ಪ್ರತಿದಿನ ಕುಡಿದು ಬಂದು ಜಗಳವಾಡುತ್ತಿದ್ದನಂತೆ. ಇದರಿಂದ ಮನನೊಂದು ತಪ್ಪಮ್ಮ ಆತ್ಮಹತ್ಯೆಗೆ ಶರಣಾಗಿದ್ದರು ಎನ್ನಲಾಗಿದೆ. ಇದೀಗ ತಂದೆಯನ್ನು ಕೊಂದು ಮಗ ಪೊಲೀಸರ ಅತಿಥಿಯಾಗಿದ್ದಾನೆ. ಆರೋಪಿ ರಮೇಶ್ ನನ್ನು ಜಗಳೂರು ಪೊಲೀಸರು ಬಂಧಿಸಿದ್ದಾರೆ.

Related Articles

Back to top button