
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೊರೊನಾ ಮೂರನೇ ಅಲೆ ಆತಂಕ ಎದುರಾಗಿರುವ ಬೆನ್ನಲ್ಲೇ ಇದೀಗ ಮಕ್ಕಳ ಮೇಲೂ ಕೋವಿದ್ ಲಸಿಕೆ ಪ್ರಯೋಗ ಆರಂಭಿಸಲಾಗಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆ ಹಾಗೂ ಮಹಾರಾಷ್ಟ್ರದ ನಾಗ್ಪುರ ಆಸ್ಪತ್ರೆಗಳಲ್ಲಿ ಲಸಿಕೆ ಪ್ರಯೋಗ ಆರಂಭವಾಗಿದೆ.
12-18 ವರ್ಷದವರೆಗಿನ 175 ಮಕ್ಕಳ ಮೇಲೆ ಭಾರತ್ ಬಯೋಟೆಕ್ ಕಂಪನಿಯ ಕೋವ್ಯಾಕ್ಸಿನ್ ಲಸಿಕೆ ಪ್ರಯೋಗ ಮಾಡಲಾಗುತ್ತಿದೆ. ಮೂರು ಗ್ರೂಪ್ ಗಳನ್ನಾಗಿ ಮಾಡಿ ಮಕ್ಕಳ ಮೇಲೆ ವ್ಯಾಕ್ಸಿನ್ ಪ್ರಯೋಗ ಮಾಡಲಾಲಾಗುತ್ತಿದೆ.
ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ತೊಂದರೆಯಾಗುವ ಸಾಧ್ಯತೆ ಹೆಚ್ಚು ಎಂಬ ಎಚ್ಚರಿಕೆ ಹಿನ್ನೆಲೆಯಲ್ಲಿ ಇದೀಗ ಲಸಿಕೆ ಪ್ರಯೋಗ ನಡೆಸಲಾಗುತ್ತಿದೆ.
ಬರೋಬ್ಬರಿ 250 ಲೀಟರ್ ಹಾಲನ್ನು ಚರಂಡಿಗೆ ಸುರಿದ ರೈತರು