*ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿದ ತಾಯಿ; ಮಕ್ಕಳು ಸಾವು; ತಾಯಿ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾತಿ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದು, ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ತಾಯಿಯನ್ನು ರಕ್ಷಿಸಲಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೆರಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೆರೆ ನೀರಲ್ಲಿ ಮುಳುಗಿ ಧನರಾಜ್ (13) ಹಾಗೂ ಛಾಯಾ (7) ಸಾವನ್ನಪ್ಪಿದ್ದಾರೆ. ಮಕ್ಕಳೊಂದಿಗೆ ಕೆರೆಗೆ ಹಾರಿದ್ದ ತಾಯಿ ಶೀಲಾ ಅವರನ್ನು ರಕ್ಷಿಸಲಾಗಿದೆ. ಆದರೆ ಅವರ ಸ್ಥಿತಿ ಕೂಡ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.Home add -Advt … Continue reading *ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿದ ತಾಯಿ; ಮಕ್ಕಳು ಸಾವು; ತಾಯಿ ಸ್ಥಿತಿ ಗಂಭೀರ*