Kannada NewsKarnataka News

ಐಎಂಇಆರ್ -ಸರಕಾರಿ ಪಾಲಿಟೆಕ್ನಿಕ್ ಎಂಒಯು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -ಕೆಎಲ್‌ಎಸ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಎಜುಕೇಶನ್ & ರಿಸರ್ಚ್ ಇತ್ತೀಚೆಗೆ ಬೆಳಗಾವಿಯ ಸರ್ಕಾರಿ ಪಾಲಿಟೆಕ್ನಿಕ್ ಜೊತೆ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಿದೆ.

ಈ ಒಪ್ಪಂದಕ್ಕೆ ಐಎಂಇ ನಿರ್ದೇಶಕ ಆರ್ ಡಾ.ಅತುಲ್ ಆರ್. ದೇಶಪಾಂಡೆ ಅವರು ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲ ವೈ.ಎನ್.ದೊಡ್ಡಮನಿ ಅವರೊಂದಿಗೆ ಸಹಿ ಹಾಕಿದರು.

ಸೂಕ್ತವಾದ ಬೋಧನೆ / ತರಬೇತಿ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುವ ಮೂಲಕ ಎರಡೂ ಸಂಸ್ಥೆಗಳು ಬೌದ್ಧಿಕ ಸಾಮರ್ಥ್ಯಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಅನುಕೂಲವಾಗಲಿದ್ದು, ಇದು ಉದ್ಯಮದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳ ಕೌಶಲ್ಯ ಮತ್ತು ಜ್ಞಾನವನ್ನು ಹೆಚ್ಚಿಸುವಲ್ಲಿ ವಿದ್ಯಾರ್ಥಿ ಸಮುದಾಯಕ್ಕೆ ಪ್ರಯೋಜನವನ್ನು ನೀಡುತ್ತದೆ ಎಂದು ಎರಡೂ ಸಂಸ್ಥೆಗಳು ಹೇಳಿವೆ.

 

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button