Latest

ಮಹಾಮಳೆಗೆ ಮೂರು ಅಂತಸ್ತಿನ ಕಟ್ಟಡ ಕುಸಿತ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಮಹಾಮಳೆಗೆ ಮುಂಬೈನಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ 10 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಜನರು ಅವಶೇಷಗಳಡಿ ಸಿಲುಕಿರುವ ಘಟನೆ ಭಿವಾಂಡಿಯಲ್ಲಿ ನಡೆದಿದೆ.

ಮುಂಜಾನೆ 3.40ರ ಸುಮಾರಿಗೆ ಮುಂಬೈನ ಪಟೇಲ್ ಕೌಂಪೌಂಡ್ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಪುಟ್ಟ ಕಂದಮ್ಮನನ್ನು ಎನ್‍ಡಿಆರ್‍ಎಫ್(ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ) ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಈ ಮೂಲಕ ಕಟ್ಟಡದ ಅವಶೇಷಗಳಡಿ ಸಿಲುಕಿದ ಐವರನ್ನು ರಕ್ಷಣೆ ಮಾಡಲಾಗಿದ್ದು, 20-25 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

40 ವರ್ಷ ಹಳೆಯದಾದ ಈ ಕಟ್ಟಡದಲ್ಲಿ ಸುಮಾರು 20 ಕುಟುಂಬಗಳು ವಾಸವಾಗಿದ್ದವು. ಕಟ್ಟಡ ಕುಸಿತ ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ ಎಂದು ಥಾಣೆ ಮುನ್ಸಿಪಲ್ ಕಾರ್ಪೋರೇಷನ್ ವಕ್ತಾರ ಮಾಹಿತಿ ನೀಡಿದ್ದಾರೆ.

 

Home add -Advt

Related Articles

Back to top button