Kannada NewsKarnataka NewsLatestNational

*ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಏಕಾಏಕಿ ಬೆಂಕಿ: 9 ಮಂದಿ ಸಜೀವ ದಹನ*

ಪ್ರಗತಿವಾಹಿನಿ ಸುದ್ದಿ: ಚಲಿಸುತ್ತಿದ್ದ ಸ್ಲೀಪರ್‌ ಬಸ್‌ನಲ್ಲಿ ಏಕಾಏಕಿ ಭಾರೀ ಬೆಂಕಿ ಕಾಣಿಸಿಕೊಂಡ ಪರಿಣಾಮ 9 ಮಂದಿ ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ. ಬಸ್‌ನಲ್ಲಿ ಸುಮಾರು 40ರಿಂದ 50 ಮಂದಿ ಪ್ರಯಾಣಿಸುತ್ತಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಲಿಸುತ್ತಿದ್ದ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿಯ ಜ್ವಾಲೆಗಳು ಇಡೀ ಬಸ್‌ಗೆ ವ್ಯಾಪಿಸಿವೆ. ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿದ್ದು, ಪ್ರಾಣ ಉಳಿಸಿಕೊಳ್ಳಲು ಕೆಲವರು ಚಲಿಸುತ್ತಿದ್ದ ಬಸ್‌ನಿಂದಲೇ ಹೊರಕ್ಕೆ ಜಿಗಿದಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್‌ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ.

.ಬೆಂಕಿ ವೇಗವಾಗಿ ಹರಡಿದ ಹಿನ್ನೆಲೆಯಲ್ಲಿ ಕೆಲ ಪ್ರಯಾಣಿಕರು ಬಸ್‌ನೊಳಗೆ ಸಿಲುಕಿರುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಸದ್ಯ ಬಸ್‌ನಲ್ಲಿ ಕೂಲ್‌ಡೌನ್ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಾರ್ಯಾಚರಣೆ ಪೂರ್ಣಗೊಂಡ ಬಳಿಕ ಬಸ್‌ನೊಳಗೆ ಪರಿಶೀಲನೆ ನಡೆಸಲಾಗುವುದು. ಆ ಬಳಿಕವಷ್ಟೇ ಬಸ್‌ನಲ್ಲಿ ಸಿಲುಕಿರುವವರ ಕುರಿತು ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಮಾಹಿತಿ ಪಡೆದುಕೊಂಡಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಗಾಯಗೊಂಡವರಿಗೆ ಅಗತ್ಯವಿರುವ ಎಲ್ಲ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮುಖ್ಯಮಂತ್ರಿಗಳ ಕಚೇರಿ (CMO) ಮಾಹಿತಿ ಪ್ರಕಾರ, ಯೋಗಿ ಆದಿತ್ಯನಾಥ್‌ ಅವರು ಮೃತರ ಕುಟುಂಬಸ್ಥರೊಂದಿಗೆ ಮಾತನಾಡಿದ್ದು, ಅವರಿಗೆ ಸಾಧ್ಯವಿರುವ ಎಲ್ಲ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಅವರು ಹಾರೈಸಿದ್ದಾರೆ.

Related Articles

Back to top button