National

*ಮತ್ತೊಂದು ದುರಂತ: ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದ ಪ್ರಯಾಣಿಕರು: ಐವರು ಸಾವು*

ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರದ ಥಾಣೆಯಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದೆ. ಚಲಿಸುತ್ತಿದ್ದ ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಥಾಣೆಯ ಮುಂಬ್ರಾ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ದೀವಾ-ಕೋಪರ್ ಪುಷ್ಪಕ್ ರೈಲಿನಿಂದ 12ಕ್ಕೂ ಹೆಚ್ಚು ಪ್ರಯಾಣಿಕರು ಕೆಳಗೆ ಬಿದ್ದಿದ್ದಾರೆ. ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ.

ರೈಲು ಮುಂಬೈ ಸಿಎಸ್ ಟಿ ನಿಲ್ದಾಣದಿಂದ ಲಖನೌಗೆ ತೆರಳುತ್ತಿತ್ತು. ಈ ವೇಳೆ ಈ ದುರಂತ ಸಂಭವಿಸಿದೆ.

Home add -Advt

Related Articles

Back to top button